Udyoga Mela: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ನಾಳೆ ಉದ್ಯೋಗ ಮೇಳ

Udyoga Mela In Kushalnagar: ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.

Written by - Zee Kannada News Desk | Last Updated : Jun 21, 2023, 08:36 PM IST
  • ನಿರುದ್ಯೋಗಿ ಯುವಕ-ಯುವತಿಯರಿಗೆ ಇಲ್ಲಿದೆ ಗುಡ್ ನ್ಯೂಸ್
  • ನಾಳೆ ಕುಶಾಲನಗರದಲ್ಲಿ ನಡೆಯುತ್ತಿದೆ ಮೆಗಾ ಉದ್ಯೋಗ ಮೇಳ
  • ಮೈಸೂರು, ಬೆಂಗಳೂರು ಸೇರಿ ಹಲವು ಕಂಪನಿಗಳಲ್ಲಿ ಉದ್ಯೋಗಾವಕಾಶ
Udyoga Mela: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ನಾಳೆ ಉದ್ಯೋಗ ಮೇಳ title=
ಮೆಗಾ ಉದ್ಯೋಗ ಮೇಳ

ಕುಶಾಲನಗರ: ಮಡಿಕೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನ ಸಹಯೋಗದಲ್ಲಿ ಜೂನ್ 22ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3 ಗಂಟೆವರೆಗೆ ಕುಶಾಲನಗರದ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಮಂಗಳೂರಿನ ದಿಯಾ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್, ಮೈಸೂರಿನ ರಾಣಿ ಮದ್ರಾಸ್, ಈಕ್ವಲೈಜರ್ RMC, ಬೆಂಗಳೂರಿನ ಜಸ್ಟ್ ಡಯಲ್, ಪುಜಿಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಮ್ಯಾಜಿಕ್ ಬಸ್ ಇಂಡಿಯಾ, ಕುಶಾಲನಗರದ ಪ್ಯಾಲೆಸ್ ಟೊಯೋಟಾ, ಪರ್ಪಲ್ ಪಾಲ್ಮ್ ರೆಸಾರ್ಟ್ ಮತ್ತು ಸ್ಪಾ, ಮಡಿಕೇರಿಯ ಅಲ್ಫಾ ಟೆಕ್ನಾಲಜಿ, ಕೂಡಿಗೆಯ ಎಸ್ಎಲ್ಎನ್ ಕಾಫಿ ಪ್ರೈವೇಟ್ ಲಿಮಿಟೆಡ್ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ.

ಇದನ್ನೂ ಓದಿ: ರಾಜ್ಯಕ್ಕೆ ಅಕ್ಕಿ ಸರಬರಾಜು: ಕೇಂದ್ರ ಗೃಹಸಚಿವರೊಂದಿಗೆ ಇಂದು ಸಿಎಂ ಮಾತುಕತೆ

ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ. ಈ ಉದ್ಯೋಗ ಮೇಳದಲ್ಲಿ SSLCಕ್ಕಿಂತ ಕಡಿಮೆ, SSLC, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗೆ ಮಡಿಕೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ. 08272-225851ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮತಾಂತರ & ಗೋ ಹತ್ಯೆ ನಿಷೇದ ಕಾನೂನನ್ನು ವಾಪಾಸ್ ಪಡೆಯುವವಂತೆ ಪೇಜಾವರ ಮಠ ಸ್ವಾಮೀಜಿ ಮನವಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News