ಇಪ್ಪತ್ತೈದು ನಿಮಿಷಗಳಲ್ಲೊಂದು ಪ್ರೇಮ ಕಥಾನಕ "ಲವ್ ರೀಸೆಟ್"

ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ಶ್ರೀಗಣೇಶ್,  ನಾನು ಮೂಲತಃ ಐಟಿ ಉದ್ಯೋಗಿ.  ಸಿನಿಮಾ ಮಾಡಬೇಕೆಂಬ ಆಸೆಯಿದೆ. ಅದರ ಪೂರ್ವಭಾವಿಯಾಗಿ ಈ ಕಿರುಚಿತ್ರ ಮಾಡಿದ್ದೇನೆ. ಇದೊಂದು ಪ್ರೇಮ ಕಥಾನಕ. ಈಗಿನ ಪ್ರೇಮಿಗಳ ಮನಸ್ಥಿತಿಯನ್ನು 25 ನಿಮಿಷಗಳಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇನೆ ಎಂದರು. 

Written by - Yashaswini V | Last Updated : Jan 24, 2024, 01:15 PM IST
  • ಈ ಕಿರುಚಿತ್ರದಲ್ಲಿ ವಿ. ನಾಗೇಂದ್ರ ಪ್ರಸಾದ್ ಬರೆದಿರುವ "ಅನುರಾಗದ ನೆನಪೀಗ ಕೊನೆಯಾಗಲಿ' ಎಂಬ ಸುಂದರವಾದ ಹಾಡೊಂದಿದೆ.
  • ಸರಿಗಮಪ ಖ್ಯಾತಿಯ ಸುನೀಲ್, ಅನನ್ಯ ಪ್ರಕಾಶ್ ದನಿಯಾಗಿರುವ ಈ ಹಾಡಿಗೆ ಜೋಯಲ್ ಹಾಗೂ ಅಭಿಲಾಶ್ ಸಂಗೀತ ನೀಡಿದ್ದಾರೆ.
  • ಈ ಹಾಡನ್ನು A2 music ಮೂಲಕ ಮೊದಲೆ ಬಿಡುಗಡೆಯಾಗಿತ್ತು
ಇಪ್ಪತ್ತೈದು ನಿಮಿಷಗಳಲ್ಲೊಂದು ಪ್ರೇಮ ಕಥಾನಕ "ಲವ್ ರೀಸೆಟ್"   title=

Love Reset: ಹಿರಿತೆರೆಯಲ್ಲಿ ಮೊದಲ ಚಿತ್ರ ನಿರ್ದೇಶಿಸುವವರು ಮೊದಲು ಕಿರುಚಿತ್ರದ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸುತ್ತಾರೆ. ಎಷ್ಟೋ ಕಿರುಚಿತ್ರಗಳು ಜನರ ಮನಸ್ಸಿಗೆ ಹತ್ತಿರವಾಗಿರುವುದು ಹೌದು. ಅಂತಹ ವಿಭಿನ್ನ ಕಿರುಚಿತ್ರ " ಲವ್ ರೀಸೆಟ್" ಇತ್ತೀಚೆಗೆ ಬಿಡುಗಡೆಯಾಗಿದೆ. 

ಶ್ರೀಗಣೇಶ್ ನಿರ್ದೇಶಿಸಿ, "ಪುಟ್ಟಕ್ಕನ ಮಕ್ಕಳು" ಖ್ಯಾತಿಯ ಪವನ್ ಕುಮಾರ್ ಹಾಗೂ ಸಂಜನಾ ಬುರ್ಲಿ ನಾಯಕ, ನಾಯಕಿಯಾಗಿ ನಟಿಸಿರುವ ಈ ಕಿರುಚಿತ್ರದ ಪ್ರೀಮಿಯರ್ ಹಾಗೂ ಪತ್ರಿಕಾಗೋಷ್ಠಿ ಇತ್ತೀಚಿಗೆ ನಡೆಯಿತು. "ಪುಟ್ಟಕ್ಕನ ಮಕ್ಕಳು" ಧಾರಾವಾಹಿ ತಂಡದವರು, ಬಿಗ್ ಬಾಸ್ ಖ್ಯಾತಿಯ ಸ್ನೇಹಿತ್, ಭೂಮಿ ಶೆಟ್ಟಿ, ರಮೇಶ್ ಪಂಡಿತ್, ಕಲಾಗಂಗೋತ್ರಿ ಮಂಜು, ಪದ್ಮಕಲಾ ಸೇರಿದಂತೆ ಅನೇಕ ಗಣ್ಯರು ಪ್ರೀಮಿಯರ್ ಗೆ ಆಗಮಿಸಿ ತಂಡಕ್ಕೆ ಶುಭ ಕೋರಿದರು.  

ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ಶ್ರೀಗಣೇಶ್,  ನಾನು ಮೂಲತಃ ಐಟಿ ಉದ್ಯೋಗಿ.  ಸಿನಿಮಾ ಮಾಡಬೇಕೆಂಬ ಆಸೆಯಿದೆ. ಅದರ ಪೂರ್ವಭಾವಿಯಾಗಿ ಈ ಕಿರುಚಿತ್ರ ಮಾಡಿದ್ದೇನೆ. ಇದೊಂದು ಪ್ರೇಮ ಕಥಾನಕ. ಈಗಿನ ಪ್ರೇಮಿಗಳ ಮನಸ್ಥಿತಿಯನ್ನು 25 ನಿಮಿಷಗಳಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇನೆ ಎಂದರು. 

ಇದನ್ನೂ ಓದಿ- VK29 ಥೀಮ್ ಪೋಸ್ಟರ್ ರಿಲೀಸ್!.. ತಂದೆಯೊಂದಿಗೆ ಇಂಡಸ್ಟ್ರಿಗೆ ಪದಾರ್ಪಣೆ ಮಾಡಲಿರುವ ದುನಿಯಾ ವಿಜಯ್‌ ಪುತ್ರಿ!

ಈ ಕಿರುಚಿತ್ರದಲ್ಲಿ ವಿ. ನಾಗೇಂದ್ರ ಪ್ರಸಾದ್ ಬರೆದಿರುವ "ಅನುರಾಗದ ನೆನಪೀಗ ಕೊನೆಯಾಗಲಿ' ಎಂಬ ಸುಂದರವಾದ ಹಾಡೊಂದಿದೆ. ಸರಿಗಮಪ ಖ್ಯಾತಿಯ ಸುನೀಲ್, ಅನನ್ಯ ಪ್ರಕಾಶ್ ದನಿಯಾಗಿರುವ ಈ ಹಾಡಿಗೆ ಜೋಯಲ್ ಹಾಗೂ ಅಭಿಲಾಶ್ ಸಂಗೀತ ನೀಡಿದ್ದಾರೆ. ಈ ಹಾಡನ್ನು  A2 music ಮೂಲಕ ಮೊದಲೆ ಬಿಡುಗಡೆಯಾಗಿತ್ತು.  7 ಶೇಡ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ    ಕಿರುಚಿತ್ರ ಬಿಡುಗಡೆ ಮಾಡಿದ್ದೇವೆ ಎಂದು ನಿರ್ದೇಶಕ ಶ್ರೀಗಣೇಶ್ ತಿಳಿಸಿದರು. 

" ಪುಟ್ಟಕ್ಕನ ಮಕ್ಕಳು " ಧಾರಾವಾಹಿ ಮುರಳಿ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲೂ ನಟಿಸುವ ಆಸೆಯಿದೆ. ಈ ಕಿರುಚಿತ್ರದಲ್ಲಿ "ಅಮರ್" ನನ್ನ ಪಾತ್ರದ ಹೆಸರು. ಪ್ರೀತಿ ಹಾಗೂ ಕೆರಿಯರ್ ವಿಷಯ ಬಂದಾಗ ಹುಡುಗ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾನೆ ಎಂಬುದನ್ನು ನಿರ್ದೇಶಕರು ಇದರಲ್ಲಿ ತೋರಿಸಿದ್ದಾರೆ ಎಂದು ನಾಯಕ ಪವನ್ ಕುಮಾರ್ ತಿಳಿಸಿದರು.           

ಇದನ್ನೂ ಓದಿ- BBK 10: ತನಿಷಾ ಬೆನ್ನಲ್ಲೇ ಬಿಗ್ ಬಾಸ್ ಮನೆಯಿಂದ ಎಲಿಮಿನೆಟ್ ಆಗುತ್ತಿರುವ ಮತ್ತೊಬ್ಬ ಸ್ಪರ್ಧಿ ಇವರೇ! ಭಗ್ನವಾಯಿತು ಫೈನಲ್ ತಲುಪುವ ಕನಸು

ಕಥೆ ಬಹಳ ಡಿಫರೆಂಟ್ ಆಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ನೋಡಿ ಹಾರೈಸಿ ಎಂದರು ನಾಯಕಿ ಸಂಜನ ಬುರ್ಲಿ.

ಛಾಯಾಗ್ರಾಹಕ ಪ್ರಜ್ವಲ್ ಭಾರದ್ವಾಜ್ ಸೇರಿದಂತೆ ಅನೇಕ ತಂತ್ರಜ್ಞರು ಕಿರುಚಿತ್ರದ ಬಗ್ಗೆ ಮಾತನಾಡಿದರು. ರಂಜಿತ್ ಶಂಕರೇಗೌಡ ಸಹ ನಿರ್ದೇಶಕರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News