ಪಶ್ಚಿಮ ಬಂಗಾಳದ ಎಲ್ಲಾ ವಿವಿಗಳಿಗೆ ಮುಖ್ಯಮಂತ್ರಿಯೇ ಕುಲಾಧಿಪತಿ..!

 ಈಗ ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯ ಸರ್ಕಾರದ ಎಲ್ಲಾ ಸಾಮ್ಯದ ವಿಶ್ವವಿದ್ಯಾನಿಲಯಗಳಿಗೆ ಮುಖ್ಯಮಂತ್ರಿಗಳನ್ನು ಕುಲಪತಿಗಳನ್ನಾಗಿ ನೇಮಿಸಲು ಯೋಜಿಸುತ್ತಿದೆ.

Written by - Zee Kannada News Desk | Last Updated : May 26, 2022, 06:48 PM IST
  • ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರು ಗುರುವಾರದಂದು ಮಾತನಾಡಿ, ರಾಜ್ಯ ಸರ್ಕಾರವು ರಾಜ್ಯಪಾಲರ ಬದಲು ಸರ್ಕಾರಿ ಸ್ವಾಮ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಮುಖ್ಯಮಂತ್ರಿ ಮಾಡಲು ಯೋಜಿಸುತ್ತಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಎಲ್ಲಾ ವಿವಿಗಳಿಗೆ ಮುಖ್ಯಮಂತ್ರಿಯೇ ಕುಲಾಧಿಪತಿ..! title=
file photos

ನವದೆಹಲಿ:  ಈಗ ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯ ಸರ್ಕಾರದ ಎಲ್ಲಾ ಸಾಮ್ಯದ ವಿಶ್ವವಿದ್ಯಾನಿಲಯಗಳಿಗೆ ಮುಖ್ಯಮಂತ್ರಿಗಳನ್ನು ಕುಲಪತಿಗಳನ್ನಾಗಿ ನೇಮಿಸಲು ಯೋಜಿಸುತ್ತಿದೆ.

ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರು ಗುರುವಾರದಂದು ಮಾತನಾಡಿ, ರಾಜ್ಯ ಸರ್ಕಾರವು ರಾಜ್ಯಪಾಲರ ಬದಲು ಸರ್ಕಾರಿ ಸ್ವಾಮ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಮುಖ್ಯಮಂತ್ರಿ ಮಾಡಲು ಯೋಜಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Wedding Photos : 17 ವರ್ಷ ಲಿವ್ ಇನ್ ನಲ್ಲಿದ್ದು, 54ನೇ ವಯಸ್ಸಿನಲ್ಲಿ ಮದುವೆಯಾದ ಈ ಬಾಲಿವುಡ್ ಜೋಡಿ!

ಈ ಉದ್ದೇಶಕ್ಕಾಗಿ, ಶೀಘ್ರದಲ್ಲೇ ಮಸೂದೆಯನ್ನು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಮತ್ತು ಈ ತಿದ್ದುಪಡಿಯನ್ನು ತರಲು ಸಂಪುಟವು ಈಗಾಗಲೇ ಒಪ್ಪಿಗೆ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ. "ರಾಜ್ಯಪಾಲರ ಬದಲಿಗೆ ಮುಖ್ಯಮಂತ್ರಿಯನ್ನು ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಕುಲಪತಿಯನ್ನಾಗಿ ಮಾಡುವ ಪ್ರಸ್ತಾವನೆಗೆ ಇಂದು ರಾಜ್ಯ ಸಚಿವ ಸಂಪುಟ ತನ್ನ ಒಪ್ಪಿಗೆ ನೀಡಿದೆ. ಈ ಪ್ರಸ್ತಾವನೆಯನ್ನು ಶೀಘ್ರದಲ್ಲೇ ವಿಧಾನಸಭೆಯಲ್ಲಿ ಮಸೂದೆಯಾಗಿ ಮಂಡಿಸಲಾಗುವುದು" ಎಂದು ಬಸು ತಿಳಿಸಿದ್ದಾರೆ.

ಇದನ್ನೂ ಓದಿ: "ವೀರ ಕಂಬಳ" ಚಿತ್ರಕ್ಕೆ ಕಥೆಯೇ ಹೀರೋ... ಸಿಹಿ ಸುದ್ದಿ ಕೊಟ್ಟ ರಾಜೇಂದ್ರ ಸಿಂಗ್ ಬಾಬು!

ಪ್ರಸ್ತುತ ಸನ್ನಿವೇಶದಲ್ಲಿ, ರಾಜ್ಯದ ರಾಜ್ಯಪಾಲರನ್ನು ಎಲ್ಲಾ ರಾಜ್ಯ-ಚಾಲಿತ ವಿಶ್ವವಿದ್ಯಾಲಯಗಳ ಕುಲಪತಿ ಎಂದು ಪರಿಗಣಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News