Beekeeping Training: ಜೇನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Beekeeping Training: ಈ ಸಂಬಂಧ ಕೊಡಗು ಜಿಲ್ಲೆಯಿಂದ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು, (ಸಾಮಾನ್ಯ ವರ್ಗ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 27ರ ಸಂಜೆ 5.30ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ​

Written by - Puttaraj K Alur | Last Updated : Oct 21, 2023, 02:16 PM IST
  • 3 ತಿಂಗಳ ಜೇನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
  • ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ
  • ರೈತರ ಮಕ್ಕಳಿಗಾಗಿ ಆಯೋಜಿಸಿರುವ ಜೇನುಗಾರಿಕೆ ತರಬೇತಿ
Beekeeping Training: ಜೇನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ title=
ಜೇನುಗಾರಿಕೆ ತರಬೇತಿ

ಮಡಿಕೇರಿ: ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ಪ್ರಸಕ್ತ (2023-24) ಸಾಲಿನ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಾಕ್ರಮವನ್ನ ಆಯೋಜಿಸಲಾಗಿದೆ. ಈ ತರಬೇತಿಯು ನವೆಂಬರ್ 2ರಿಂದ 2024ರ ಜನವರಿ 31ರವರೆಗೆ ನಡೆಯಲಿದೆ.

 ಈ ಸಂಬಂಧ ಕೊಡಗು ಜಿಲ್ಲೆಯಿಂದ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು, (ಸಾಮಾನ್ಯ ವರ್ಗ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 25ರವರೆಗೆ ಅರ್ಜಿಯನ್ನು ಮಡಿಕೇರಿಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದ ಕಚೇರಿ/ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ)ಗೆ ಕಳುಹಿಸಬಹುದು.

ಇದನ್ನೂ ಓದಿ: ನೆಕ್ಸ್ಟ್ ಎಪಿಸೋಡ್ ಸತೀಶ್ ಅವರನ್ನೇ ಕೇಳಿ: ಸತೀಶ್‌‌ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 27ರ ಸಂಜೆ 5.30ಗಂಟೆಯೊಳಗೆ ಸಲ್ಲಿಸಬೇಕು. ಮೂಲ ಅಗತ್ಯ ದಾಖಲಾತಿಗಳೊಡನೆ (SSLC ಅಂಕಪಟ್ಟಿ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ RTC, ತಂದೆ/ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಸಲ್ಲಿಸಬೇಕು.

ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿಯನ್ನು ಮಡಿಕೇರಿಯ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ)ಗೆ ಖುದ್ದು ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯ್ತಿಯ ತೋಟಗಾರಿಕಾ ಉಪ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ : ಲಾಡ್ ಭವಿಷ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News