ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ! ಹೇಗಿರುವುದು ಸೀಟು ಹಂಚಿಕೆ ಲೆಕ್ಕ ?

2024 Lok Sabha Election: ಮೂಲಗಳ ಮಾಹಿತಿ ಪ್ರಕಾರ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಬಿಜೆಪಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ. 2024ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ತಯಾರಿಯೂ ಜೋರಾಗಿದೆ. 

Written by - Ranjitha R K | Last Updated : Jun 7, 2023, 12:50 PM IST
  • ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳ ತಯಾರಿ
  • ತನ್ನ ಮೈತ್ರಿಯನ್ನು ವಿಸ್ತರಿಸಲು ಮುಂದಾದ ಬಿಜೆಪಿ
  • ಒಂದಾಗುತ್ತಾ ಜೆಡಿಎಸ್ ಬಿಜೆಪಿ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ! ಹೇಗಿರುವುದು ಸೀಟು ಹಂಚಿಕೆ ಲೆಕ್ಕ ?  title=

2024 Lok Sabha Election : 2024ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ತಯಾರಿಯೂ ಜೋರಾಗಿದೆ. ಒಂದೆಡೆ ಬಿಜೆಪಿಯೇತರ ಪಕ್ಷಗಳು ಒಗ್ಗೂಡುವ ಕಾರ್ಯದಲ್ಲಿ ನಿರತರಾಗಿದ್ದರೆ, ಮತ್ತೊಂದೆಡೆ ಬಿಜೆಪಿ ಕೂಡಾ ತನ್ನ ಮೈತ್ರಿಯನ್ನು ವಿಸ್ತರಿಸಲು ಮುಂದಾಗಿದೆ. ಈ ದಿಸೆಯಲ್ಲಿ ಕರ್ನಾಟಕದ ಪ್ರಮುಖ ಪಕ್ಷಗಳಲ್ಲಿ ಒಂದಾದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸಿದೆ. ಮೂಲಗಳ ಪ್ರಕಾರ 2024ರ ಲೋಕಸಭೆ ಚುನಾವಣೆ ವೇಳೆಗೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡೇ ಕಣಕ್ಕೆ ಇಳಿಯಲಿದೆ. 

4 ಲೋಕಸಭಾ ಸ್ಥಾನ ನೀಡುವಂತೆ ಜೆಡಿಎಸ್ ಬಿಜೆಪಿ ಮುಂದೆ ಬೇಡಿಕೆ ಇಟ್ಟಿದೆ. ಜೆಡಿಎಸ್‌ನ ಈ ಬೇಡಿಕೆಯನ್ನು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ ಅಥವಾ ತಿರಸ್ಕರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಮೂಲಗಳ ಮಾಹಿತಿ ಪ್ರಕಾರ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಬಿಜೆಪಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ. 

ಇದನ್ನೂ ಓದಿ : ಕರ್ನಾಟಕ ವಿಧಾನ ಪರಿಷತ್ತಿನ 3 ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ: ಚುನಾವಣಾ ಆಯೋಗ

ಮಾಜಿ ಪ್ರಧಾನಿ ದೇವೇಗೌಡರ ಸೂಚನೆ :  
ಭಾರತೀಯ ಜನತಾ ಪಕ್ಷದೊಂದಿಗೆ ಪ್ರತ್ಯಕ್ಷ ಅಥವಾ ಪರೋಕ್ಷ ಸಂಪರ್ಕ ಹೊಂದಿಲ್ಲದ ಯಾವುದಾದರೂ ಪಕ್ಷ ದೇಶದಲ್ಲಿ ಇದೆಯೇ ಎಂದು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಪ್ರಶ್ನಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರೋಧಿ ರಂಗವನ್ನು ನಿರ್ಮಿಸುವ ಪ್ರಯತ್ನದ ಬಗ್ಗೆ ಕೇಳಿದ ಪ್ರಶ್ನೆಗೆ, ಅವರು ಉತ್ತರಿಸಿದ್ದಾರೆ. "ನಾನು ಈ ದೇಶದ ರಾಜಕೀಯವನ್ನು ವಿವರವಾಗಿ ವಿಶ್ಲೇಷಿಸಬಲ್ಲೆ. ಇಡೀ ದೇಶದಲ್ಲಿ  ಬಿಜೆಪಿಯೊಂದಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಂಬಂಧ ಹೊಂದಿರದ ಒಂದು ಪಕ್ಷವನ್ನು ನನಗೆ ತೋರಿಸಿ ಎಂದು ,   ಅವರು ಹೇಳಿದ್ದಾರೆ.

ದೇಶದ ರಾಜಕೀಯ ವಾತಾವರಣದ ಬಗ್ಗೆ ಚರ್ಚಿಸಲು ನಾನು ಬಯಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೇಳಿದ್ದಾರೆ. ಇದರ ಅವಶ್ಯಕತೆ ಇಲ್ಲ ಎಂದಿದ್ದಾರೆ. ಪ್ರಧಾನಿ, ಮುಖ್ಯಮಂತ್ರಿ, ಸಂಸದರ ರೂಪದಲ್ಲಿ ದೇಶವನ್ನು ನೋಡಿದ್ದೇನೆ. ಸಮಾನ ಮನಸ್ಕ ಪಕ್ಷಗಳ ಕೋರಿಕೆಯ ಮೇರೆಗೆ ಬಿಜೆಪಿ ವಿರುದ್ದವಾಗಿ ಮೈತ್ರಿ ಮಾಡಿಕೊಳ್ಳುವ  ಬಗ್ಗೆ ಪ್ರತಿಕ್ರಿಯಿಸಲು  ದೇವೇಗೌಡರು ನಿರಾಕರಿಸಿದ್ದಾರೆ. ಯಾರು ಕೋಮುವಾದಿ, ಯಾರು ಕೋಮುವಾದಿ ಅಲ್ಲ, ಎನ್ನುವುದು ನನಗೆ ಗೊತ್ತಿಲ್ಲ. ಮೊದಲನೆಯದಾಗಿ, ಕೋಮುವಾದ ಮತ್ತು ಕೋಮುವಾದದ ವ್ಯಾಖ್ಯಾನವನ್ನು ಸರಿಪಡಿಸಬೇಕು ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮುಂದಿನ 3 ದಿನ ಭಾರೀ ಮಳೆ

ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಹಲವು ವಿಷಯಗಳಿದ್ದರೂ ಗಮನ ಹರಿಸುತ್ತಿಲ್ಲ ಎಂದು ದೇವೇಗೌಡ ವಿಷಾದ ವ್ಯಕ್ತಪಡಿಸಿದ್ದಾರೆ. ನಮ್ಮ  ಕಾರ್ಯಕರ್ತರು ನಮ್ಮ ಶಕ್ತಿ. ಅವರನ್ನು ಒಗ್ಗೂಡಿಸುವ ಮತ್ತು ಪ್ರೋತ್ಸಾಹಿಸುವ ಮೂಲಕ ಪ್ರಾದೇಶಿಕ ಪಕ್ಷವನ್ನು ಬಲಪಡಿಸುವ, ರಕ್ಷಿಸುವ ಮತ್ತು ಮುನ್ನಡೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News