Earthquake In Kodagu: ಕೊಡಗು ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ

Earthquake In Kodagu: ಕೊಡಗು ಜಿಲ್ಲೆಯ ಹಲವೆಡೆ ಮತ್ತೆ ಭೂಕಂಪದ ಅನುಭವವಾದ ಬಗ್ಗೆ ವರದಿ ಆಗಿದೆ. ಮಡಿಕೇರಿಯಲ್ಲಿಯೂ ಇಂದು ಮುಂಜಾನೆ ಲಘು ಭೂಕಂಪ ಆಗಿದೆ ಎಂದು ತಿಳಿದುಬಂದಿದೆ.

Written by - Yashaswini V | Last Updated : Jun 28, 2022, 10:12 AM IST
  • ಮಡಿಕೇರಿಯಲ್ಲಿಯೂ ಲಘು ಭೂಕಂಪದ ಅನುಭವ
  • ಜಿಲ್ಲೆಯಲ್ಲಿ ವಾರದಲ್ಲಿ ಮೂರನೇ ಬಾರಿಗೆ ಭೂಕಂಪ
  • ಸ್ಥಳೀಯರಲ್ಲಿ ಆತಂಕ
Earthquake In Kodagu: ಕೊಡಗು ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ title=
Earthquake Today In Karnataka

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಇಂದು ಬೆಳಿಗ್ಗೆ 7:45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಡಿಕೇರಿಯಲ್ಲಿಯೂ ಲಘು ಭೂಕಂಪದ ಅನುಭವವಾಗಿದ್ದು ಜಿಲ್ಲೆಯಲ್ಲಿ ವಾರದಲ್ಲಿ ಮೂರನೇ ಬಾರಿಗೆ ಈ ರೀತಿಯ ಅನುಭವವಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. 

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕರಿಕೆ, ಪೆರಾಜೆ ಭಾಗಮಂಡಲ, ಸಂಪಾಜೆ ಕರ್ಣಂಗೇರಿ ಸೇರಿದಂತೆ ಹಲವೆಡೆ ಇಂದು ಬೆಳಿಗ್ಗೆ  ಭೂಕಂಪ ದ ಅನುಭವವಾದ ಬಗ್ಗೆ ವರದಿ ಆಗಿದೆ. ಈ ವೇಳೆ ಮನೆಯಲ್ಲಿದ್ದ ಸಾಮಾನುಗಳು ಅಳುಗಾದಿರುವ ಬಗ್ಗೆಯೂ  ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.  

ಇದನ್ನೂ ಓದಿ- Earthquake in Afghanistan: ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: 200ಕ್ಕೂ ಹೆಚ್ಚು ಸಾವು

ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು, ಕೊಡಗು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ ಸುಮಾರು ಐದು ಸೆಕೆಂಡುಗಳ ಕಾಲ ಭೂಮಿ ನಡುಗಿದ ಬಗ್ಗೆ ಜನರು ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಲಾಗಿದೆ. ದತ್ತಾಂಶಗಳ ಪರಿಶೀಲನೆ ನಡೆಯುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ- ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆ : IMD ಎಚ್ಚರಿಕೆ

ಗಮನಾರ್ಹವಾಗಿ ಕಳೆದ ಜೂನ್ 22ರಂದು ಹಾಸನ ಜಿಲ್ಲೆಯ ಹಲವೆಡೆ ಭೂಕಂಪದ ವರದಿ ಆಗಿತ್ತು. ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣ, ಮುದ್ದನಹಳ್ಳಿ, ಹನೆಮಾರನಹಳ್ಳಿ, ಕ್ಯಾತನಹಳ್ಳಿ, ಹೊಳೆನರಸೀಪುರದಲ್ಲಿ ಭೂಕಂಪ ಆಗಿರುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ದೃಢಪಡಿಸಿತ್ತು. ಹಾಸನ ಜಿಲ್ಲೆಯಲ್ಲಿ 3.4 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮಾಹಿತಿ ನೀಡಿತ್ತು. 

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ನಾಗರನಹಳ್ಳಿ ಗ್ರಾಮ ಪಂಚಾಯಿತಿಯ ಮಲುಗನಹಳ್ಳಿ ಗ್ರಾಮದ 0.8ಕಿಮೀ ದೂರದಲ್ಲಿ ಈ ಭೂಕಂಪದ ಕೇಂದ್ರಬಿಂದು ಪತ್ತೆ ಆಗಿತ್ತು. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News