ದುಬಾರಿ ಕಾರು ಖರೀದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!

Lokshabha Elections 2024: ಕೋಟಿಗಟ್ಟಲೆ ಹಣ ವ್ಯಯಿಸಿ ದುಬಾರಿ ಕಾರುಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲವೆಂದು ಕರ್ನಾಟಕ ಬಿಜೆಪಿ ಕಿಡಿಕಾರಿದೆ. 

Written by - Puttaraj K Alur | Last Updated : May 6, 2024, 04:26 PM IST
  • ಭೀಕರ ಬರದ ನಡುವೆ 1.36 ಕೋಟಿ ವೆಚ್ಚದಲ್ಲಿ 7 ಹೊಸ ಕಾರು ಖರೀದಿ
  • ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ
  • "ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು" ಎಂದು ಟೀಕೆ
ದುಬಾರಿ ಕಾರು ಖರೀದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ! title=
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!

ಬೆಂಗಳೂರು: ಭೀಕರ ಬರದ ನಡುವೆಯೂ 1.36 ಕೋಟಿ ರೂ. ವೆಚ್ಚದಲ್ಲಿ 7 ಹೊಸ ಕಾರುಗಳನ್ನು ಖರೀದಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 

ಈ ಬಗ್ಗೆ ಸೋಮವಾರ ಟ್ವೀಟ್‌ ಮಾಡಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯರ ವಿರುದ್ಧ ಕಿಡಿಕಾರಿದೆ. "ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು" ಇದು ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಮಾಡುತ್ತಿರುವ ಪರಿ ಎಂದು ಟೀಕಿಸಿದೆ.

ಇದನ್ನೂ ಓದಿ: ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ಸೇವನೆ ಬಳಿಕ 80 ಜನ ಅಸ್ವಸ್ಥ

ಶತಮಾನದಲ್ಲಿಯೇ ಕಂಡು ಕೇಳರಿಯದಂತಹ ಭೀಕರ ಬರ ಎದುರಾದರೂ ರೈತರಿಗೆ ಬರ ಪರಿಹಾರ ನೀಡುವಲ್ಲಿ ರಾಜಕೀಯ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ದುಬಾರಿ ಕಾರುಗಳನ್ನು ಖರೀದಿಸಲು ಅನುಮೋದನೆ ನೀಡಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. 

ಕೋಟಿಗಟ್ಟಲೆ ಹಣ ವ್ಯಯಿಸಿ ದುಬಾರಿ ಕಾರುಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲ. ಇಂತಹ ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಮೇ 7 ರಂದು ಪ್ರತಿಯೊಬ್ಬ ನಾಡಿನ ಹೆಮ್ಮೆಯ ರೈತರು ತಕ್ಕ ಉತ್ತರ ನೀಡಬೇಕು ಎಂದು ಬಿಜೆಪಿ ಕುಟುಕಿದೆ. 

ಇದನ್ನೂ ಓದಿ: ಮುಂದಿನ ಐದು ದಿನ ಈ ಜಿಲ್ಲೆಗಳಲ್ಲಿ ಕುಂಭ ದ್ರೋಣ ಮಳೆ!ಗುಡುಗು, ಮಿಂಚು, ಗಾಳಿ ಸಹಿತ ಎಡೆಬಿಡದೆ ಅಬ್ಬರಿಸಲಿದ್ದಾನೆ ವರುಣ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News