Lok Sabha Election 2024: "ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು"-ಸಿಎಂ ಸಿದ್ದರಾಮಯ್ಯ

Lok Sabha Election 2024:ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ.ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

Written by - Manjunath Naragund | Last Updated : Apr 21, 2024, 04:21 PM IST
  • ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ.
  • ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15ನೇ ಹಣಕಾಸು ಆಯೋಗದಲ್ಲಿ‌ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ.
  • ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
Lok Sabha Election 2024: "ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು"-ಸಿಎಂ ಸಿದ್ದರಾಮಯ್ಯ  title=

Lok Sabha Election 2024: ಕೋಲಾರ: ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.

ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತನೀಡುವಂತೆ ಮನವಿ ಮಾಡಿದರು.

ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ.

ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ.ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ : ಆರ್‌ ಅಶೋಕ್‌

ಸನ್ಮಾನ್ಯ ದೇವೇಗೌಡರೇ,ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ? ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ? ಎಂದು ಕುಟುಕಿದ್ದಾರೆ.

ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು.ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಅಲ್ವಾ ದೇವೇಗೌಡರೇ? ಎಂದು ಅವರು ವ್ಯಂಗ್ಯವಾಡಿದ್ದಾರೆ.

ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15ನೇ ಹಣಕಾಸು ಆಯೋಗದಲ್ಲಿ‌ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಟ್ರು ಲವ್, ಜಸ್ಟೀಸ್ ಫಾರ್ ದಿ ಲವ್ ಎಂಬ ಪೋಸ್ಟ್ ಮಾಡಿದ್ರು

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೌತಮ್ ಗೆಲುವು ನಿಶ್ಚಿತವಾಗಿದೆ. ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಬಹುಮತ ನೀಡಿ ಶಾಸಕ ನಾರಾಯಣಸ್ವಾಮಿಯವರಿಗೆ ಹೆಚ್ಚಿನ ಶಕ್ತಿ ನೀಡಿ ಎಂದು ಮನವಿ ಅವರು ಮಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News