Lok Sabha Election 2024: "ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ. ಈ ಚಂದಕ್ಕೆ ಇವರು ಪ್ರಧಾನಿ ಆಗ್ಬೇಕಾ?"

Lok Sabha Election 2024: ಹತ್ತತ್ತು ವರ್ಷ ಪ್ರಧಾನಿ ಆಗಿ ರೈತರಿಗೆ, ಕಾರ್ಮಿಕರಿಗೆ, ಯುವ ಸಮೂಹಕ್ಕೆ, ಮಹಿಳೆಯರಿಗೆ, ದುಡಿಯುವ ವರ್ಗಗಳಿಗೆ, ಕೃಷಿ ಕಾರ್ಮಿಕರಿಗೆ, ಮಧ್ಯಮ ವರ್ಗದವರಿಗೆ, ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳಿಗೆ ಒಂದೇ ಒಂದು ಕಾರ್ಯಕ್ರಮವನ್ನೂ ಕೊಡಲಾಗಲಿಲ್ಲವಲ್ಲ ಏಕೆ. ಮತೆ ನೀವು ಪ್ರಧಾನಿ ಆಗಿ ಭಾರತೀಯರಿಗೆ, ದೇಶಕ್ಕೆ ಸಿಕ್ಕಿದ್ದಾದರೂ ಏನು ಎಂದು ಪ್ರಶ್ನಿಸಿದರು

Written by - Prashobh Devanahalli | Edited by - Manjunath Naragund | Last Updated : Apr 18, 2024, 09:10 PM IST
  • ವಿದೇಶದಿಂದ ಕಪ್ಪು ಹಣ ತರುವುದಾಗಿ ಹೇಳಿದ್ರಿ ತರಲಿಲ್ಲ.
  • ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಿ, ಹೊಸ ಉದ್ಯೋಗ ಸೃಷ್ಟಿಯಾಗುವುದಿರಲಿ ಇರುವ ಉದ್ಯೋಗಗಳೇ ನಷ್ಟ ಆದವು
  • ಆದರೆ ರೈತರ ಖರ್ಚು ಮೂರು ಪಟ್ಟು ಆಗಿದೆ, ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚುವುದಾಗಿ ಹೇಳಿದ್ರಿ
 Lok Sabha Election 2024: "ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ. ಈ ಚಂದಕ್ಕೆ ಇವರು ಪ್ರಧಾನಿ ಆಗ್ಬೇಕಾ?" title=
file photo

ದೊಡ್ಡಬಳ್ಳಾಪುರ ಏ 18: ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ ಹೆಚ್ಚಳ, ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ. ಈ ಚಂದಕ್ಕೆ ಇವರು ಪ್ರಧಾನಿ ಆಗ್ಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ದೊಡ್ಡಬಳ್ಳಾಪುರದಲ್ಲಿ ರೋಡ್ ಶೋ ನಡೆಸಿ ಮಾತನಾಡಿದರು.

ಹತ್ತತ್ತು ವರ್ಷ ಪ್ರಧಾನಿ ಆಗಿ ರೈತರಿಗೆ, ಕಾರ್ಮಿಕರಿಗೆ, ಯುವ ಸಮೂಹಕ್ಕೆ, ಮಹಿಳೆಯರಿಗೆ, ದುಡಿಯುವ ವರ್ಗಗಳಿಗೆ, ಕೃಷಿ ಕಾರ್ಮಿಕರಿಗೆ, ಮಧ್ಯಮ ವರ್ಗದವರಿಗೆ, ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳಿಗೆ ಒಂದೇ ಒಂದು ಕಾರ್ಯಕ್ರಮವನ್ನೂ ಕೊಡಲಾಗಲಿಲ್ಲವಲ್ಲ ಏಕೆ. ಮತೆ ನೀವು ಪ್ರಧಾನಿ ಆಗಿ ಭಾರತೀಯರಿಗೆ, ದೇಶಕ್ಕೆ ಸಿಕ್ಕಿದ್ದಾದರೂ ಏನು ಎಂದು ಪ್ರಶ್ನಿಸಿದರು. 

ಇದನ್ನೂ ಓದಿ- ಮಂಡ್ಯ ಜನಸಾಗರಕ್ಕೆ ಶ್ರೀರಾಮನವಮಿ ಶುಭಾಶಯ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿದೇಶದಿಂದ ಕಪ್ಪು ಹಣ ತರುವುದಾಗಿ ಹೇಳಿದ್ರಿ ತರಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಿ, ಹೊಸ ಉದ್ಯೋಗ ಸೃಷ್ಟಿಯಾಗುವುದಿರಲಿ ಇರುವ ಉದ್ಯೋಗಗಳೇ ನಷ್ಟ ಆದವು. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದಿರಿ, ಆದರೆ ರೈತರ ಖರ್ಚು ಮೂರು ಪಟ್ಟು ಆಗಿದೆ, ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚುವುದಾಗಿ ಹೇಳಿದ್ರಿ, ಆದರೆ ರೂಪಾಯಿ ಮೌಲ್ಯ ಹೆಚ್ಚಾಗಲೇ ಇಲ್ಲ ಎಂದು ಮೋದಿ ವೈಫಲ್ಯಗಳ ಸುದೀರ್ಘ ಪಟ್ಟಿಯನ್ನೇ ಪ್ರಸ್ತಾಪಿಸಿದರು. 

ಬಿಜೆಪಿಯಾಗಲೀ, ಮೋದಿಯವರಾಗಲೀ ಕೊಟ್ಟ ಮಾತಲ್ಲಿ ಒಂದನ್ನೂ ಈಡೇರಿಸಲಿಲ್ಲ. ಬದಲಿಗೆ ಹೇಳಿದ್ದಕ್ಕೆ ಉಲ್ಟಾ ಅನಾಹುತಗಳನ್ನೇ ಮಾಡಿದ್ದಾರೆ ಎಂದರು. 

ಇದನ್ನೂ ಓದಿ- ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!

ಕೋವಿಡ್ ಭ್ರಷ್ಟಾಚಾರಿಗೆ ತಕ್ಕ ಶಾಸ್ತಿ..! 

ಕೊರೋನಾ ಸಂದರ್ಭದಲ್ಲೂ ಕೋಟಿ ಕೋಟಿ ಕೊಳ್ಳೆ ಹೊಡೆದವರನ್ನು ಕ್ಷಮಿಸಲು ಸಾಧ್ಯವೇ? ಕೋವಿಡ್ ಹಗರಣದ ತನಿಖೆ ನಡೆಯುತ್ತಿದೆ. ಹಗರಣ ನಡೆದಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿರುವ ಬಗ್ಗೆ ನನಗೆ ಮಾಹಿತಿ ಇದೆ. ತನಿಖೆ ಪೂರ್ಣಗೊಂಡ ಬಳಿಕ ಭ್ರಷ್ಟಾಚಾರಿಕೆ ತಕ್ಕ ಶಾಸ್ತಿ ಆಗುತ್ತದೆ. ಆದ್ದರಿಂದ ಬಿಜೆಪಿ ಅಭ್ಯರ್ಥಿ ಸುಧಾಕರ್ ಅವರನ್ನು ಸೋಲಿಸಿ ಕನ್ನಡ ನಾಡಿನ ಪರವಾಗಿ ಧ್ವನಿ ಎತ್ತುವ ರಕ್ಷಾ ರಾಮಯ್ಯರನ್ನು ಗೆಲ್ಲಿಸಿಕೊಂಡು ಬನ್ನಿ. ರಕ್ಷಾ ರಾಮಯ್ಯ ನೂರಕ್ಕೆ ನೂರು ಗೆಲ್ತಾರೆ  ಎಂದು ಭರವಸೆ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News