ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ : ಆರ್‌ ಅಶೋಕ್‌

ರಾಜ್ಯದಲ್ಲಿ ತಾಲಿಬಾನ್‌ ಸರ್ಕಾರ ಆಡಳಿತ ನಡೆಸುತ್ತಿದೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟು ಜನರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು ಎಂಬ ಮನಸ್ಥಿತಿಯನ್ನು ದುಷ್ಟ ಕಾಂಗ್ರೆಸ್‌ ಉಂಟುಮಾಡಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : Apr 21, 2024, 02:21 PM IST
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ
    • ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು
    • ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ
ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ : ಆರ್‌ ಅಶೋಕ್‌ title=

ಆನೇಕಲ್‌ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಪರ ಚುನಾವಣಾ ಪ್ರಚಾರದಲ್ಲಿ ಅವರು ಪಾಲ್ಗೊಂಡರು. ಬಳಿಕ ಬಿದಿರುಕುಪ್ಪೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ತಾಲಿಬಾನ್‌ ಸರ್ಕಾರ ಆಡಳಿತ ನಡೆಸುತ್ತಿದೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟು ಜನರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು ಎಂಬ ಮನಸ್ಥಿತಿಯನ್ನು ದುಷ್ಟ ಕಾಂಗ್ರೆಸ್‌ ಉಂಟುಮಾಡಿದೆ. ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ. ನೀವು ನಮ್ಮ ಮತಬ್ಯಾಂಕ್‌ ಆಗಿದ್ದು, ನಿಮ್ಮ ಪೂರ್ತಿ ರಕ್ಷಣೆ ಮಾಡುತ್ತೇವೆ ಎಂದು ಸರ್ಕಾರವೇ ಹೇಳಿದೆ. ಜೈ ಶ್ರೀರಾಮ್‌ ಎಂದರೆ, ಮೋದಿ ಕುರಿತು ಹಾಡು ಹಾಕಿದರೆ ಹೊಡೆಯುತ್ತಾರೆ. ಪಾಕ್‌ ಜಿಂದಾಬಾದ್‌ ಎಂದವರಿಗೆ ಬಿರಿಯಾನಿ ಜೊತೆಗೆ ಪಾಸ್‌ ಕೂಡ ಕೊಡುತ್ತಾರೆ ಎಂದರು. 

ಇದನ್ನೂ ಓದಿ: ನೇಹಾ ಹತ್ಯೆ ಕುರಿತು ಮೌನ ಮುರಿದ ಡಿಬಾಸ್‌, ಶಿವಣ್ಣ..! ಹೇಳಿದ್ದೇನು ಗೊತ್ತೆ..?

ಡಿ.ಕೆ.ಸುರೇಶ್‌ ಅವರ ರ‍್ಯಾಲಿಯಲ್ಲಿ ಕೆಲವರು ಪಾಕಿಸ್ತಾನ ಜೈ ಎಂದಿದ್ದಾರೆ. ಆದರೆ ಡಿ.ಕೆ.ಸುರೇಶ್‌ ಏನೂ ಮಾತಾಡದೆ ಸುಮ್ಮನೆ ನಿಂತಿದ್ದರು. ಈಗಾಗಲೇ ಅವರು ದೇಶ ಒಡೆಯುವ ಮಾತನಾಡಿದ್ದಾರೆ. ಭಾರತಮಾತೆಯನ್ನು ಪ್ರೀತಿಸುವ ಬೆಂಗಳೂರು ಗ್ರಾಮಾಂತರದ ಜನರು ಇವರಿಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದರು.

ಹುಬ್ಬಳ್ಳಿಯಲ್ಲಿ ನಡೆದ ಘಟನೆ ನೋಡಿದರೆ ಕಾಲೇಜು ಆವರಣದಲ್ಲೇ ಭದ್ರತೆ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಕೊಲೆಯಾದ ನೇಹಾ ತಂದೆ ಕಾಂಗ್ರೆಸ್‌ನ ಕಾರ್ಪೊರೇಟರ್‌ ಲವ್‌ ಜಿಹಾದ್‌ ಇದೆ ಎಂದಿದ್ದಾರೆ. ಕಾಂಗ್ರೆಸ್‌ ನಾಯಕರು ಹೀಗೆ ಮಾತನಾಡಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕುಟುಂಬದವರು ಹೇಳಿದ್ದಾರೆ. ಇಷ್ಟಾದರೂ ಕಾಂಗ್ರೆಸ್‌ ನಾಯಕರು ಇದು ಲವ್‌ ಕೇಸ್‌ ಎಂದು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ದೂರಿದರು.

ಇದನ್ನೂ ಓದಿ:ಒಬ್ಬನ ತಪ್ಪಿಗೆ ʼಆʼ ಕೋಮಿನ ಮೇಲೆ ಅಪರಾಧ ಹೊರಿಸುವುದು ಸರಿಯಲ್ಲ..! ನಟ ಕಿಶೋರ್‌

ರಾಮೇಶ್ವರಂ ಕೆಫೆಯಲ್ಲಿ ನಡೆದ ಘಟನೆ ಭಯೋತ್ಪಾದನಾ ಚಟುವಟಿಕೆಯಾಗಿದ್ದು, ಇದನ್ನು ಮಾಡುವವರೆಲ್ಲ ಡಿ.ಕೆ.ಶಿವಕುಮಾರ್‌ ಅವರ ಸಹೋದರರೇ ಆಗಿದ್ದಾರೆ. ಕುಕ್ಕರ್‌ ಬಾಂಬ್‌ ಸ್ಫೋಟ ಮಾಡಿದವನನ್ನು ಬ್ರದರ್‌ ಎಂದ ಡಿ.ಕೆ.ಶಿವಕುಮಾರ್‌ ಒಕ್ಕಲಿಗ ಹೇಗಾಗುತ್ತಾರೆ? ಒಕ್ಕಲಿಗ ಮುಖಂಡ ಎಂದು ಹೇಳಿಕೊಂಡು ಮತ ಯಾಚಿಸುವುದು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದರು. 

ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಹೇಳಿಕೆ ನೀಡಿದ ನಂತರ ಕ್ಷಮೆ ಕೇಳುತ್ತಾರೆ. ಕಾಂಗ್ರೆಸ್‌ ಕಾರ್ಪೊರೇಟರ್‌ ತಮ್ಮ ಜೊತೆ ಈಗ ಯಾರೂ ಇಲ್ಲ ಎಂದಿದ್ದಾರೆ. ಕಾಂಗ್ರೆಸ್‌ ನಾಯಕರು ತಮ್ಮ ಕಾರ್ಯಕರ್ತರನ್ನೇ ಬಿಟ್ಟುಬಿಡುತ್ತಾರೆ ಎಂದರು. 

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ಗೆ ಚೊಂಬು ಗ್ಯಾರಂಟಿ. ರಾಹುಲ್‌ ಗಾಂಧಿಗೆ ನಾವು ಚೊಂಬು ಕಳುಹಿಸಿಕೊಡಲಿದ್ದು, ಅವರು ವಿದೇಶಕ್ಕೆ ಹೋಗಿ ಏನಾದರೂ ಮಾಡಲಿ. ಸೋತ ಬಳಿಕ ಅವರು ಖಂಡಿತ ವಿದೇಶಕ್ಕೆ ಹೋಗುತ್ತಾರೆ ಎಂದರು. 

ಕಾಂಗ್ರೆಸ್‌ ಕೊಟ್ಟ ಚೊಂಬುಗಳು : ಕಾಂಗ್ರೆಸ್‌ ಸರ್ಕಾರ ರೈತರಿಗೆ ಬೋರ್‌ವೆಲ್‌ ಅನುದಾನ ಕಿತ್ತುಕೊಂಡು ಮೊದಲ ಚೊಂಬು ನೀಡಿದೆ. ಕಿಸಾನ್‌ ಸಮ್ಮಾನ್‌ ಕಿತ್ತುಕೊಂಡಿದ್ದು ಎರಡನೇ ಚೊಂಬು, ಹಾಲಿನ ಪ್ರೋತ್ಸಾಹಧನ ನುಂಗಿದ್ದು ಮೂರನೇ ಚೊಂಬು, ಬರಗಾಲದ್ದು ನಾಲ್ಕನೇ ಚೊಂಬು, ಕಾವೇರಿ ನೀರನ್ನು ಸ್ನೇಹಕ್ಕೆ ತಮಿಳುನಾಡಿಗೆ ಬಿಟ್ಟಿದ್ದು ಐದನೇ ಚೊಂಬು, ವಿದ್ಯುತ್‌ ಶುಲ್ಕ ಹೆಚ್ಚಿಸಿದ್ದು ಆರನೇ ಚೊಂಬು. ಹಾಲು, ಮೊಸರು ದರ ಹೆಚ್ಚಳ, ಆಲ್ಕೋಹಾಲ್‌ ಬೆಲೆ ಹೆಚ್ಚಳ ಸೇರಿದಂತೆ ಹಲವಾರು ಚೊಂಬುಗಳನ್ನು ನೀಡಿದೆ ಎಂದರು. 

ಇದನ್ನೂ ಓದಿ:

ಕಾಂಗ್ರೆಸ್‌ ಬಂತು ನಕ್ಸಲ್‌ ತಂತು : ಕಾಂಗ್ರೆಸ್‌ ಬಂತು, ಭಯೋತ್ಪಾದನೆ ಬಂತು, ನಕ್ಸಲ್‌ ಬಂತು, ಬಾಂಬ್‌ ಬಂತು ಎಂಬ ಸ್ಥಿತಿ ಉಂಟಾಗಿದೆ. ಹಿಂದೂಗಳನ್ನು ರಕ್ಷಿಸುವ ಶಕ್ತಿ ಇರುವುದು ಶಕ್ತಿಮಾನ್‌ ನರೇಂದ್ರ ಮೋದಿ ಅವರಿಗೆ ಮಾತ್ರ. ಮೋದಿ ಸರ್ಕಾರ ಬಂದ ಬಳಿಕ ಭಯೋತ್ಪಾದನೆ ನಿಯಂತ್ರಣಕ್ಕೆ ಬಂದಿದೆ. ಬಿಜೆಪಿ ಸರ್ಕಾರ ಇದ್ದಾಗ ಬಾಂಬ್‌ ಸ್ಫೋಟವಾದರೂ ಆಗ ಅವರನ್ನು ಬೆಂಬಲಿಸದೆ ಹೆಡೆಮುರಿ ಕಟ್ಟಿದ್ದೇವೆ ಎಂದರು. 

ಬೆಂಗಳೂರು ಗ್ರಾಮಾಂತರ ಹೃದಯವಂತ ಮಂಜುನಾಥ್‌ ಬೇಕೋ, ಕಲ್ಲು ಹೃದಯದ ಕಟುಕ ಡಿ.ಕೆ.ಸುರೇಶ್‌ ಬೇಕೋ ಎಂದು ಜನರು ತೀರ್ಮಾನಿಸುತ್ತಾರೆ. ಮಂಜುನಾಥ್‌ ಮೂರು ಲಕ್ಷ ಅಂತರದಲ್ಲಿ ಗೆಲ್ಲುತ್ತಾರೆ. ಈ ಕ್ಷೇತ್ರವನ್ನೂ ಗೆದ್ದರೆ ಒಂದು ಸೀಟು ಕೂಡ ಕಾಂಗ್ರೆಸ್‌ಗೆ ಸಿಗುವುದಿಲ್ಲ ಎಂದರು. 

ಪೆಟ್ರೋಲ್‌ ದರ ಏರಿಕೆ ಭಾರತದಲ್ಲಿ ನಿಯಂತ್ರಣದಲ್ಲಿದೆ. ಬೆಲೆ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನು ಮೋದಿ ಸರ್ಕಾರ ಕೈಗೊಂಡಿದೆ. ಪೆಟ್ರೋಲ್‌ ದರ ಇಡೀ ಜಗತ್ತಿನಲ್ಲಾಗಿದೆ. ಆಗ ರಷ್ಯಾದಿಂದ ತೈಲ ತರಿಸಿಕೊಳ್ಳಲಾಯಿತು ಎಂದರು. ರಾಜ್ಯ ಸರ್ಕಾರ ಬೀಳಲಿದೆ ಎಂದು ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ. ಶಾಸಕರು ಈಗ ಗಂಟು ಮೂಟೆ ಕಟ್ಟಿ ತಯಾರಾಗಿದ್ದಾರೆ. ಬಿಜೆಪಿಯವರು ಸರ್ಕಾರ ಬೀಳಿಸುವುದಿಲ್ಲ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News