ಮಂದಿರ ಉದ್ಘಾಟನೆಗೆ ಬಾರದ ಕಾಂಗ್ರೆಸ್ಸಿಗರಿಗೆ ಶ್ರೀರಾಮನೇ ಬುದ್ಧಿ ಕಲಿಸುತ್ತಾನೆ : ಆರ್‌.ಅಶೋಕ

ದೇಶದ ಎಲ್ಲ ಸಮುದಾಯಗಳು ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಯುತ್ತಿವೆ. ಆದರೆ ರಾಮಮಂದಿರದ ಕಾರ್ಯಕ್ರಮಕ್ಕೆ ಹೋಗದಿರುವುದು ಕಾಂಗ್ರೆಸ್‌ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ. ಅವರಿಗೆ ಶ್ರೀರಾಮನೇ ಬುದ್ದಿ ಕಲಿಸುತ್ತಾನೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : Jan 10, 2024, 07:53 PM IST
  • ದೇಶದ ಜನರು ಶ್ರೀರಾಮಮಂದಿರದ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಯುತ್ತಿದ್ದಾರೆ.
  • ರಾಮ ಮಂದಿರ ವಿಚಾರದಲ್ಲಿ ಕಾಂಗ್ರೆಸ್‌ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ ಮಾಡುತ್ತಿದೆ.
  • ಕಾಂಗ್ರೆಸ್‌ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ.
ಮಂದಿರ ಉದ್ಘಾಟನೆಗೆ ಬಾರದ ಕಾಂಗ್ರೆಸ್ಸಿಗರಿಗೆ ಶ್ರೀರಾಮನೇ ಬುದ್ಧಿ ಕಲಿಸುತ್ತಾನೆ : ಆರ್‌.ಅಶೋಕ title=

ಬೆಂಗಳೂರು : ಇಡೀ ದೇಶದ ಜನರು ಶ್ರೀರಾಮಮಂದಿರದ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಯುತ್ತಿರುವಾಗ, ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್‌ ತನ್ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ ತೋರಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲ ಸಮುದಾಯಗಳು ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಯುತ್ತಿವೆ. ಆದರೆ ರಾಮಮಂದಿರದ ಕಾರ್ಯಕ್ರಮಕ್ಕೆ ಹೋಗದಿರುವುದು ಕಾಂಗ್ರೆಸ್‌ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ. ಮುಸ್ಲಿಮರ ಓಲೈಕೆಗಾಗಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಅವರಾದರೂ ನಮ್ಮ ಕೈ ಹಿಡಿಯಲಿ ಎಂಬ ಕಾರಣಕ್ಕೆ ಕಾಂಗ್ರೆಸ್‌ ನಾಯಕರು ಇಂತಹ ತೀರ್ಮಾನಕ್ಕೆ ಬಂದಿದ್ದಾರೆ. ಇದು ಕಾಂಗ್ರೆಸ್‌ಗೆ ಹಿಂದಿನಿಂದಲೇ ಬೆಳೆದು ಬಂದ ಚಾಳಿ ಎಂದರು.

ಇದನ್ನೂ ಓದಿ:ಗಾಂಜಾ ಮಾರುತ್ತಿದ್ದ ಕ್ಯಾಬ್ ಚಾಲಕರು ಅಂದರ್: 25 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್

ಹಿಂದೆ ನ್ಯಾಯಾಲಯದಲ್ಲಿ ಪ್ರಕರಣ ನಡೆಯುವಾಗ ರಾಮ ಹುಟ್ಟಿರುವುದಕ್ಕೆ ಜನ್ಮ ಪ್ರಮಾಣ ಪತ್ರ ಇದೆಯೇ ಎಂದು ಕಾಂಗ್ರೆಸ್‌ ಕೇಳಿತ್ತು. ರಾಮಜನ್ಮಭೂಮಿಯ ಕುರುಹುಗಳ ಬಗ್ಗೆ ಸಂದೇಹವನ್ನೂ ವ್ಯಕ್ತಪಡಿಸಿದ್ದರು. ರಾಮಾಯಾಣ ಕಾಲ್ಪನಿಕ, ಅದು ನಡೆದೇ ಇಲ್ಲ ಎಂದು ಅವರು ವಾದಿಸಿದ್ದರು. ಹಿಂದೂಗಳನ್ನು ಕಂಡರೆ ಕಾಂಗ್ರೆಸ್‌ಗೆ ಮೊದಲಿಂದಲೂ ಅಲರ್ಜಿ. ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಈ ರೀತಿ ತೀರ್ಮಾನ ಕೈಗೊಂಡಿರುವುದರಿಂದ ಹಿಂದೂಗಳನ್ನು ಕಡೆಗಣಿಸಿದಂತಾಗಿದೆ ಎಂದರು.

ಶ್ರೀರಾಮಮಂದಿರ ಉದ್ಘಾಟನೆ ವೇಳೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯಾಗಲಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಲ್ಲ ಕಡೆ ರಾಮ ಎನ್ನುತ್ತಾರೆ, ಸಿದ್ದರಾಮಯ್ಯನವರು ನನ್ನ ಹೆಸರಲ್ಲೇ ರಾಮ ಇದೆ ಎನ್ನುತ್ತಾರೆ. ಆದರೂ ಅವರು ಯಾರೂ ಉದ್ಘಾಟನೆಗೆ ಹೋಗುವುದಿಲ್ಲ. ಇಡೀ ದೇಶದ ಜನರು ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ನಾನು ಸಂಗ್ರಹಿಸಿದ ಆರೇಳು ಕೋಟಿ ರೂಪಾಯಿ ದೇಣಿಗೆಯಲ್ಲಿ ಸುಮಾರು 1 ಕೋಟಿ ರೂಪಾಯಿಯನ್ನು ಮುಸ್ಲಿಮರು ನೀಡಿದ್ದರು. ಕಾಂಗ್ರೆಸ್‌ ನಾಯಕರು ಕುತಂತ್ರ ಮಾಡಿ ಹಿಂದೂ ಮುಸ್ಲಿಮರನ್ನು ಒಡೆಯುತ್ತಿದ್ದಾರೆ. ಇಂತಹ ನೀಚ ಬುದ್ಧಿಗಳಿಗೆ ಶ್ರೀರಾಮನೇ ಬುದ್ಧಿ ಕಲಿಸುತ್ತಾನೆ. ಕಾಂಗ್ರೆಸ್‌ ನಾಯಕರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಹರಿಹಾಯ್ದರು.

ಇದನ್ನೂ ಓದಿ:ಭಾರತದ ಇತಿಹಾಸದಲ್ಲೇ ಯಾವ ಸರ್ಕಾರವೂ ಇಷ್ಟು ದೊಡ್ಡ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮಾಲ್ಡೀವ್ಸ್‌ ವಿಚಾರವಾಗಿ ಹಿರಿಯ ನಾಯಕರಾದ ಶರದ್‌ ಪವಾರ್‌, ಚಿತ್ರನಟರು, ಸಾಮಾನ್ಯ ಜನರು ಪ್ರಧಾನಿ ಮೋದಿಗೆ ಬೆಂಬಲಿಸಿದ್ದಾರೆ. ಆದರೆ ಸೋನಿಯಾ ಗಾಂಧಿ ಗುಂಪು, ಪ್ರಧಾನಿಗೆ ಅಪಮಾನವಾದರೂ ಪರವಾಗಿಲ್ಲ, ನಮ್ಮ ಬೇಳೆ ಬೇಯಿಸಿಕೊಳ್ಳಬೇಕು ಎಂಬಂತೆ ಹೇಳಿಕೆ ಕೊಟ್ಟಿದ್ದಾರೆ. ಒಟ್ಟಾರೆಯಾಗಿ ಅವರು ಮುಸ್ಲಿಮ್‌ ಓಲೈಕೆ ರಾಜಕಾರಣ ಮಾಡುತ್ತಾ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದಾರೆ ಎಂದರು. 

ಬಿಜೆಪಿ ಸಭೆ : ಬಿಜೆಪಿ ಸಭೆಯ ಕುರಿತು ಮಾಹಿತಿ ನೀಡಿದ ಆರ್‌.ಅಶೋಕ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವ ಕುರಿತು ಚರ್ಚಿಸಲಾಗಿದೆ. ಯಾವುದೇ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ. ಆಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರದ ನಾಯಕರು ಸಮೀಕ್ಷೆ ಮಾಡಿದ್ದು, ಎಲ್ಲವನ್ನೂ ಅವರೇ ತೀರ್ಮಾನಿಸುತ್ತಾರೆ ಎಂದರು.

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News