Nitin Gadkari: ರಾಜ್ಯದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಕೇಂದ್ರ ಸಚಿವ ಗಡ್ಕರಿ ಶಂಕುಸ್ಥಾಪನೆ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ ಅಂತಾ CM ಬೊಮ್ಮಾಯಿ ಹೇಳಿದರು.

Written by - Prashobh Devanahalli | Edited by - Puttaraj K Alur | Last Updated : Feb 28, 2022, 04:38 PM IST
  • 238 KM ಉದ್ದದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ
  • 3,972 ಕೋಟಿ ರೂ. ವೆಚ್ಚದ ಈ ರಾಷ್ಟ್ರೀಯ ಹೆದ್ದಾರಿಗಳು ಅಂತರ ರಾಜ್ಯ ರಸ್ತೆ ಸಂಪರ್ಕವನ್ನು ಸುಧಾರಿಸಲಿವೆ
  • ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಕರ್ನಾಟಕದ ಸಾರಿಗೆ ಚಿತ್ರಣವೇ ಬದಲಾಗಲಿದೆ
Nitin Gadkari: ರಾಜ್ಯದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಕೇಂದ್ರ ಸಚಿವ ಗಡ್ಕರಿ ಶಂಕುಸ್ಥಾಪನೆ   title=
5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ನಿತಿನ್ ಗಡ್ಕರಿ ಚಾಲನೆ

ಬೆಳಗಾವಿ: 238 KM ಉದ್ದದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ(Union Minister Nitin Gadkari) ಸೋಮವಾರ ಬೆಳಗಾವಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. 3,972 ಕೋಟಿ ರೂ. ವೆಚ್ಚದ ಈ ರಾಷ್ಟ್ರೀಯ ಹೆದ್ದಾರಿಗಳು ಕರ್ನಾಟಕದಿಂದ ಮಹಾರಾಷ್ಟ್ರ ಮತ್ತು ಗೋವಾಕ್ಕೆ ಅಂತರ ರಾಜ್ಯ ರಸ್ತೆ ಸಂಪರ್ಕವನ್ನು ಸುಧಾರಿಸಲಿವೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai), ‘ಬೆಳಗಾವಿಯಲ್ಲಿ ಇಂದು ರಸ್ತೆ ಕ್ರಾಂತಿ ಆಗುತ್ತಿದೆ. ಇಂದು 5 ರಾಷ್ಟ್ರೀಯ ಹೆದ್ದಾರಿಗಳ ಲೋಕಾರ್ಪಣೆ(5 Road Projects)ಯಾಗಿದೆ’ ಅಂತಾ ಹೇಳಿದರು. ಹುಬ್ಬಳ್ಳಿ-ಧಾರವಾಡ ಬೈಪಾಸ್ 6 ಪಥದ ರಸ್ತೆ ನಿರ್ಮಾಣಕ್ಕೆ ಚಾಲನೆ ಕಾರ್ಯಕ್ರಮಕ್ಕೂ ಮುನ್ನ ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಸಿಎಂ ಬೊಮ್ಮಾಯಿ, ‘ರಾಜ್ಯದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಕರ್ನಾಟಕದ ಸಾರಿಗೆ ಚಿತ್ರಣವೇ ಬದಲಾಗಲಿದೆ’ ಅಂತಾ ಹೇಳಿದರು.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಡಿಕೆಶಿಗೆ ವ್ಯಕ್ತಿತ್ವ ವಿಕಸನ ಶಿಬಿರವಾಗಿದೆ: ಬಿಜೆಪಿ ಟೀಕೆ

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ’ ಅಂತಾ ಹೇಳಿದರು.ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಹಲವಾರು ಯೋಜನೆ(National Highway)ಗಳಿಗೆ ಚಾಲನೆ ನೀಡಿದ್ದು, ಲೋಕಾರ್ಪಣೆಗೊಳಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ರಾಜ್ಯದ ಬಗೆಗಿನ ಕಳಕಳಿಯಿಂದ ಹಲವಾರು ಅಭಿವೃದ್ಧಿ ಯೋಜನೆಗಳು ಕರ್ನಾಟಕದಲ್ಲಿ ಅನುಷ್ಠಾನವಾಗಿವೆ. ಗಡ್ಕರಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಹಾಗೂ ರಾಜ್ಯ ಹೆದ್ದಾರಿಗಳ ಉನ್ನತೀಕರಣದ ಯೋಜನೆಗಳು ಜಾರಿಯಾಗುತ್ತಿವೆ’ ಅಂತಾ ಇದೇ ವೇಳೆ ತಿಳಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ‘ನಿತಿನ್ ಗಡ್ಕರಿ(Road Transport and Highways) ಕರ್ನಾಟಕಕ್ಕೆ ಅತೀಹೆಚ್ಚು ಅನುದಾನ ನೀಡಿದ್ದಾರೆ. ಹಿಂದಿನ ಎಲ್ಲಾ ದಾಖಲೆ ಮೀರಿ ಪ್ರಧಾನಿ ಮೋದಿಯವರು ‘ಗ್ರಾಮ ಸಡಕ್ ಯೋಜನೆ’ಗೆ ಅನುದಾನ ನೀಡಿದ್ದಾರೆ. 2014ರವರೆಗೆ 91,000 KM ರಸ್ತೆ ನಿರ್ಮಾಣವಾಗಿತ್ತು. ಈಗ 1.41 ಲಕ್ಷ KM ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ’ ಅಂತಾ ಹೇಳಿದರು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಕೇಂದ್ರ ನವೀನ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಐದು ಯೋಜನೆಗಳಿಗೆ ಶಂಕುಸ್ಥಾಪನೆ

  • ಬೆಳಗಾವಿ-ಸಂಕೇಶ್ವರ ಬೈಪಾಸ್ 6 ಪಥದ ರಸ್ತೆ (40 KM). ಇದರ ಯೋಜನಾ ವೆಚ್ಚ 1,479.3 ಕೋಟಿ ರೂ. ಆಗಿದ್ದು, 1 ಟೋಲ್ ಪ್ಲಾಜಾ, 39 ಬಸ್ ನಿಲ್ದಾಣ, 4 ಗ್ರೇಡ್ ಸಪರೇಟರ್, 14 ಟ್ರಕ್ ನಿಲುಗಡೆ ಸ್ಥಳಗಳು ನಿರ್ಮಾಣವಾಗಲಿವೆ.
  • ಸಂಕೇಶ್ವರ ಬೈಪಾಸ್‌-ಮಹಾರಾಷ್ಟ್ರ ಗಡಿವರಗೆ ಷಟ್ಪತ ರಸ್ತೆ ನಿರ್ಮಾಣ (37.836 KM). ಇದರ ಯೋಜನಾ ವೆಚ್ಚ 1,388 ಕೋಟಿ ರೂ. ಆಗಿದ್ದು, 16 ಬಸ್ ನಿಲ್ದಾಣ, 3 ಗ್ರೇಡ್ ಸಪರೇಟರ್, ಟೋಲ್ ಪ್ಲಾಜಾ ನಿರ್ಮಾಣವಾಗಲಿದೆ.  
  • ಚೋರ್ಲಾ-ಜಾಂಬೋಟಿ-ಬೆಳಗಾವಿ ನಡುವಿನ ದ್ವಿಪಥ ರಸ್ತೆ (69.19 KM) ಇದರ ಯೋಜನಾ ವೆಚ್ಚ 246.78 ಕೋಟಿ ರೂ. ಆಗಿದ್ದು, 9 ಬಸ್ ನಿಲ್ದಾಣ, ಟೋಲ್ ಪ್ಲಾಜಾ ನಿರ್ಮಾಣವಾಗಲಿವೆ.
  • ವಿಜಯಪುರ-ಮುಂಡರಗಿ (NH.548B, 79.7 KM) ದ್ವಿಪಥ ಕಾಮಗಾರಿ. ಇದರ ಯೋಜನಾ ವೆಚ್ಚ 766.64 ಕೋಟಿ ರೂ. ಆಗಿದೆ.  
  • ಸಿದ್ದಾಪುರ-ವಿಜಯಪುರ ದ್ವಿಪಥ ರಸ್ತೆ ವಿಸ್ತರಣೆ ಕಾಮಗಾರಿ (NH.561A , 11.62 KM). ಇದರ ಯೋಜನಾ ವೆಚ್ಚ 90.13 ಕೋಟಿ. ರೂ. ಆಗಿದೆ.
  • ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ 6 ಪಥದ ರಸ್ತೆಯಾಗಿ ಅಗಲೀಕರಣ. 1014.79 ಕೋಟಿ ರೂ. ವೆಚ್ಚದಲ್ಲಿ 30.6 KM ರಸ್ತೆ ನಿರ್ಮಾಣ. 2 ವರ್ಷದಲ್ಲಿ ಕಾಮಗಾರಿ ಪೂರ್ಣ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಜಮೀರ್ ಅಹ್ಮದ್ ವಿರುದ್ಧ ಡಿ.ಕೆ.ಶಿವಕುಮಾರ್ ಗರಂ..!?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News