ಜಾವೆಲಿನ್ ಥ್ರೋ ನಲ್ಲಿ ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿದ ನೀರಜ್ ಚೋಪ್ರಾ

ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲಿ 88.77 ಮೀಟರ್‌ಗಳಷ್ಟು ದೂರ ಜಾವೆಲಿನ್ ಎಸೆದು ಫೈನಲ್‌ ಪ್ರವೇಶಿಸಿದ್ದಾರೆ.  ಇಲ್ಲಿಯವರೆಗೆ, ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಒಂದೂ ಚಿನ್ನದ ಪದಕವನ್ನು ಗೆದ್ದಿಲ್ಲ.   

Written by - Ranjitha R K | Last Updated : Aug 25, 2023, 03:24 PM IST
  • ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿದ ನೀರಜ್ ಚೋಪ್ರಾ
  • ಚಿನ್ನದ ಪದಕದ ಮೇಲೆ ನೀರಜ್ ಚೋಪ್ರಾ ಕಣ್ಣು
  • ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಾಂಪಿಯನ್
ಜಾವೆಲಿನ್ ಥ್ರೋ ನಲ್ಲಿ ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿದ ನೀರಜ್ ಚೋಪ್ರಾ title=

ಬೆಂಗಳೂರು : ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಅಲ್ಲದೆ ಪ್ಯಾರಿಸ್ ಒಲಿಂಪಿಕ್ಸ್‌ಗೂ ಅರ್ಹತೆ ಪಡೆದಿದ್ದಾರೆ. ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲಿ 88.77 ಮೀಟರ್‌ಗಳಷ್ಟು ದೂರ ಜಾವೆಲಿನ್ ಎಸೆದು ಫೈನಲ್‌ ಪ್ರವೇಶಿಸಿದ್ದಾರೆ.  ಇಲ್ಲಿಯವರೆಗೆ, ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಒಂದೂ ಚಿನ್ನದ ಪದಕವನ್ನು ಗೆದ್ದಿಲ್ಲ. 
 
ಚಿನ್ನದ ಪದಕದ ಮೇಲೆ  ನೀರಜ್ ಚೋಪ್ರಾ  ಕಣ್ಣು : 
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಇದೀಗ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ. ಕಳೆದ ವರ್ಷ ನೀರಜ್ ಚೋಪ್ರಾ ಈ ಟೂರ್ನಿಯಲ್ಲಿ ಬೆಳ್ಳಿ ಗೆದ್ದಿದ್ದರು. ಅಂತಿಮ ಪಂದ್ಯ ಆಗಸ್ಟ್ 27 ರಂದು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 11.45ಕ್ಕೆ ಆರಂಭವಾಗಲಿದೆ.

ಇದನ್ನೂ ಓದಿ : Cricketers Meal: ಕ್ರಿಕೆಟ್ ಪಂದ್ಯದ ವೇಳೆ ಕ್ರಿಕೆಟಿಗರ ಆಹಾರ ಪದ್ದತಿ ಹೇಗಿರುತ್ತೆ ಗೊತ್ತಾ?

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಾಂಪಿಯನ್ : 
ನೀರಜ್ ಚೋಪ್ರಾ 2021ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ್ದರು. ಈ ಮೂಲಕ ಅಥ್ಲೆಟಿಕ್ಸ್‌ನಲ್ಲಿ ಒಲಿಂಪಿಕ್ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆ ಸಂದರ್ಭದಲ್ಲಿ ಚೋಪ್ರಾ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಈ ಸಾಧನೆ ಮಾಡಿದ್ದರು. ಇದಾದ ಬಳಿಕ ಜ್ಯೂರಿಚ್‌ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್‌ನಲ್ಲಿಯೂ ಚಿನ್ನ ಗೆದ್ದು ದೇಶದ ಕೀರ್ತಿ ಪತಾಕೆ ಹಾರಿಸಿದ್ದರು. 

ಇದನ್ನೂ ಓದಿ : ಕ್ರಿಕೆಟ್ ಪಂದ್ಯದ ವೇಳೆ ಆಟಗಾರರು ಏನು ತಿನ್ನುತ್ತಾರೆ? ದೊಡ್ಡ ರಹಸ್ಯ ಬಹಿರಂಗ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News