Yuzvendra Chahal : T20 ಕ್ರಿಕೆಟ್ ನಲ್ಲಿ ಹೊಸ ವಿಶ್ವದಾಖಲೆ ನಿರ್ಮಿಸಿದ ಯುಜ್ವೇಂದ್ರ ಚಾಹಲ್

Yuzvendra Chahal Wickets: ಟಿ20 ಕ್ರಿಕೆಟ್‌ನಲ್ಲಿ ಕೆಲವೇ ಎಸೆತಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಯಜುವೆಂದ್ರ ಚಾಹಲ್‌ಗಿದೆ. ಪ್ರಸಕ್ತ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ ಒಂದು ವಿಕೆಟ್ ಪಡೆಯುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ.

Written by - Manjunath N | Last Updated : May 8, 2024, 07:36 AM IST
  • ಯುಜ್ವೇಂದ್ರ ಚಾಹಲ್ ತಮ್ಮ ಅತ್ಯುತ್ತಮ ಬೌಲಿಂಗ್‌ಗೆ ಹೆಸರುವಾಸಿಯಾಗಿದ್ದಾರೆ
  • ಅವರು 2016 ರಲ್ಲಿ ಟಿ 20 ಅಂತರಾಷ್ಟ್ರೀಯ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದರು
  • ಆ ಬಳಿಕ ಭಾರತ ತಂಡದ ಪರ 80 ಟಿ20 ಪಂದ್ಯಗಳಲ್ಲಿ 96 ವಿಕೆಟ್‌ಗಳನ್ನು ಕಬಳಿಸಿದ್ದಾರೆ
 Yuzvendra Chahal : T20 ಕ್ರಿಕೆಟ್ ನಲ್ಲಿ ಹೊಸ ವಿಶ್ವದಾಖಲೆ ನಿರ್ಮಿಸಿದ ಯುಜ್ವೇಂದ್ರ ಚಾಹಲ್ title=

Yuzvendra Chahal Wickets: ಟಿ20 ಕ್ರಿಕೆಟ್‌ನಲ್ಲಿ ಕೆಲವೇ ಎಸೆತಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಯಜುವೆಂದ್ರ ಚಾಹಲ್‌ಗಿದೆ. ಪ್ರಸಕ್ತ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ ಒಂದು ವಿಕೆಟ್ ಪಡೆಯುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಜುವೇಂದ್ರ ಚಹಾಲ್ ನಾಯಕ ರಿಷಬ್ ಪಂತ್ ಅವರ ವಿಕೆಟ್ ಪಡೆದರು.ಇದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ 350 ವಿಕೆಟ್‌ಗಳನ್ನು ಪೂರೈಸಿದ್ದಾರೆ.ಟಿ20 ಕ್ರಿಕೆಟ್ ಇತಿಹಾಸದಲ್ಲಿ 350 ವಿಕೆಟ್ ಪಡೆದ ಭಾರತದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಇವರಿಗಿಂತ ಮೊದಲು ಯಾವುದೇ ಭಾರತೀಯ ಆಟಗಾರ ಟಿ20 ಕ್ರಿಕೆಟ್‌ನಲ್ಲಿ 350 ವಿಕೆಟ್‌ಗಳನ್ನು ಕಬಳಿಸಲು ಸಾಧ್ಯವಾಗಿರಲಿಲ್ಲ.ಪಿಯೂಷ್ ಚಾವ್ಲಾ 310 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಇದನ್ನು ಓದಿ : ಕಲ್ಲಂಗಡಿ ಸೇವನೆಯಿಂದ ಈ ಆರೋಗ್ಯಕರ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯರು:

1 - ಯುಜುವೇಂದ್ರ ಚಹಾಲ್: 350 ವಿಕೆಟ್
2 - ಪಿಯೂಷ್ ಚಾವ್ಲಾ: 310 ವಿಕೆಟ್
3 - ರವಿಚಂದ್ರನ್ ಅಶ್ವಿನ್: 303 ವಿಕೆಟ್
4- ಭುವನೇಶ್ವರ್ ಕುಮಾರ್: 297 ವಿಕೆಟ್
5 - ಅಮಿತ್ ಮಿಶ್ರಾ: 285 ವಿಕೆಟ್

2024ರ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆದರು

ಯುಜ್ವೇಂದ್ರ ಚಾಹಲ್ ತಮ್ಮ ಅತ್ಯುತ್ತಮ ಬೌಲಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಅವರು 2016 ರಲ್ಲಿ ಟಿ 20 ಅಂತರಾಷ್ಟ್ರೀಯ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದರು. ಆ ಬಳಿಕ ಭಾರತ ತಂಡದ ಪರ 80 ಟಿ20 ಪಂದ್ಯಗಳಲ್ಲಿ 96 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಚಾಹಲ್ ಪ್ರಸಕ್ತ ಐಪಿಎಲ್ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.ಈ ಕಾರಣಕ್ಕಾಗಿ, ಅವರು 2024 ರ ಟಿ 20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೂ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಮತಗಟ್ಟೆಗೆ ಬರುವ ಮತದಾರರ ಆರೋಗ್ಯ ಕಾಳಜಿಗೆ ಮೆಡಿಸಿನ್ ಕಿಟ್ ಸಿದ್ದ..!

ಯುಜುವೇಂದ್ರ ಚಹಾಲ್ ಉತ್ತಮ ಫಾರ್ಮ್‌ನಲ್ಲಿದ್ದಾರೆ

ಯುಜ್ವೇಂದ್ರ ಚಹಾಲ್ ಟಿ20 ಕ್ರಿಕೆಟ್‌ನಲ್ಲಿ 301 ಪಂದ್ಯಗಳನ್ನು ಆಡುವ ಮೂಲಕ 350 ವಿಕೆಟ್‌ಗಳನ್ನು ಪಡೆದಿದ್ದಾರೆ, ಅದರಲ್ಲಿ ಅವರು ಭಾರತ ತಂಡದಲ್ಲಿ ಆಡುವಾಗ 96 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಐಪಿಎಲ್‌ನಲ್ಲಿ 201 ವಿಕೆಟ್‌ಗಳನ್ನು ಹೊಂದಿದ್ದಾರೆ. ಅವರು ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ಪರ ಆಡಿದ್ದಾರೆ. ಸದ್ಯ ಅವರು ಐಪಿಎಲ್ 2024 ರ 11 ಪಂದ್ಯಗಳಲ್ಲಿ 14 ವಿಕೆಟ್ ಪಡೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
 

 

Trending News