ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳು. ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ. ಪ್ರಣಾಳಿಕೆ ರಚನೆಯಲ್ಲಿ ನನಗೆ ಅವಕಾಶ ನೀಡಿರುವುದು ಈ ‘ಕರ್ನಾಟಕ ಮಾದರಿ ಆಡಳಿತ’ಕ್ಕೆ ಎಐಸಿಸಿ ನೀಡಿರುವ ಗೌರವ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.