ಬರಗಾಲಕ್ಕೆ ತುತ್ತಾಗಿ ತೀವ್ರ ಸಂಕಷ್ಟದಲ್ಲಿರುವ ಕರ್ನಾಟಕದ ರೈತರಿಗೆ ಪರಿಹಾರ ನೀಡಬೇಕೆಂದು ತಿಂಗಳುಗಳಿಂದ ಮನವಿ ಸಲ್ಲಿಸಿ ಒತ್ತಾಯಿಸುತ್ತಿದ್ದರೂ ಇಲ್ಲಿಯ ವರೆಗೆ ಪೈಸೆ ಹಣವನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿ ಅವರು ಕೀನ್ಯಾ ದೇಶದ ಕೃಷಿ ಕ್ಷೇತ್ರದ ಆಧುನೀಕರಣಕ್ಕಾಗಿ 250 ಮಿಲಿಯನ್ ಡಾಲರ್ಗಳಷ್ಟು ನೆರವು ನೀಡಿರುವುದನ್ನು ನೋಡಿದಾಗ ಸಹಜವಾಗಿಯೇ ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ ಎಂಬ ಪ್ರಶ್ನೆ ಕೇಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ, ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ? 'ಹಿಂದುಗಳೆಲ್ಲ ಒಂದು' ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್.ಎಸ್.ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ "ಹಿಂದೂ..ಒಂದು" ಎಂದು ಸುಳ್ಳುಹೇಳಿ ಜನರನ್ನು ನಂಬಿಸಿ ಮೋಸಮಾಡುವುದನ್ನು ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.