ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ದುಃಖ, ಆಘಾತ ವ್ಯಕ್ತಪಡಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು.ಈ ಬಗ್ಗೆ X ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ಇಂಥ ಆಸಕ್ತರನ್ನು ಸರಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಶಾಸನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ನಮ್ಮ ಅಕ್ಕಿ ಬಳಸಿಕೊಂಡು ಜನತೆಗೆ ಬಿಜೆಪಿ ಮಂತ್ರಾಕ್ಷತೆ ಹಂಚುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇವರ ಅಕ್ಕಿ ಎಂದರೆ ದೊಡ್ಡ ಆಲದಹಳ್ಳಿಯ ಅವರ ತೋಟದಲ್ಲಿ ಬೆಳೆದಿರುವುದಾ? ಎಂದು ಟಾಂಗ್ ಕೊಟ್ಟರು.
ಮುಂದಿನ ಕ್ಯಾಬಿನೆಟ್ ಬದಲಾವಣೆ ವೇಳೆ ಮಂತ್ರಿ ಆಗೋ ವಿಚಾರ
ಮಂತ್ರಿ ಆಗೋ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಆಸೆಯೂ ಇಲ್ಲ
28 ಕ್ಷೇತ್ರ ಗೆಲ್ಲೋದು ನಮ್ಮ ಗುರಿ.. ಮಂತ್ರಿಯಾಗಿ ಏನ್ ಮಾಡಲಿ
ನನ್ನ ಮುಂದೆ ಇರೋ ಅಜೆಂಡಾ ಕಾಂಗ್ರೆಸ್ ಪಕ್ಷ ಸೋಲಿಸೋದು
ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ಜೆಡಿಎಸ್ ಪಕ್ಷವನ್ನು ಮುಗಿಸುವುದೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಉದ್ದೇಶವಾಗಿದೆ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಒಂದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ರಾಮಭಕ್ತರನ್ನು ಹಾಗೂ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಿ, ಕಿರುಕುಳ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಪೈಪೋಟಿ ಹೆಚ್ಚಾದ ಹಿನ್ನೆಲೆ JDS ವರಿಷ್ಟ ದೊಡ್ಡಗೌಡ್ರು ಗೊಂದಲ. ಮುಖಂಡರನ್ನ ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳಲು HDKಗೆ ಮಂಡ್ಯದ ಟಿಕೆಟ್. ಮತ್ತೊಂದು ಕಡೆ ಸುಮಲತರನ್ನು ಹಣೆಯಲು HDK ಬಾಣ ಪ್ರಯೋಗ.
₹40,000 crore scam: ಸಚಿವ ಮಧು ಬಂಗಾರಪ್ಪರವರದ್ದು ವಯಕ್ತಿಕ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರ, ಅವರು ಸಾರ್ವಜನಿಕರ ತೆರಿಗೆಯ ಹಣವನ್ನು ಲಾಪಟಾಯಿಸಿಲ್ಲ, ತಮ್ಮ ಇಲಾಖೆಯಲ್ಲಿ ಅವ್ಯವಹಾರ ಮಾಡಿಲ್ಲ, ಸರ್ಕಾರಕ್ಕೆ ಸಂಬಂಧಿಸಿದಂತೆ ಯಾವುದೇ ಹಗರಣ ನಡೆಸಿಲ್ಲ, ಸರ್ಕಾರದ ಹಣಕ್ಕೆ ನಷ್ಟ ಉಂಟುಮಾಡಿಲ್ಲವೆಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ರಾಜ್ಯ ಕಾಂಗ್ರೆಸ್ ಸರಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ಮೀನಾಮೇಷ ಎಣಿಸುತ್ತಿದೆ. ಆದರೆ ʼರಾಜಕೀಯ ಗಂಜಿ ಕೇಂದ್ರʼಗಳನ್ನು ಯಥೇಚ್ಚವಾಗಿ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಬರದ ನಡುವೆಯೂ ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ಕರುಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ರಮವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದು ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು.
Congress Slams family politics: ಕುಟುಂಬ ರಾಜಕಾರಣ ವಿರೋಧಿಸಿ ಬೂಟಾಟಿಕೆಯ ಮಾತಾಡುವ ಮೋದಿಯವರು "ದೇವೇಗೌಡರ ರಾಜಕೀಯ ಕುಟುಂಬ"ದೊಂದಿಗೆ ಪೋಸ್ ಕೊಡುವ ಮೂಲಕ ತಮ್ಮನ್ನು ತಾವೇ ವ್ಯಂಗ್ಯ ಮಾಡಿಕೊಳ್ಳುತ್ತಿದ್ದಾರೆ’ ಎಂದು ಕಾಂಗ್ರೆಸ್ ಕುಟುಕಿದೆ.
BJP-JD(S) alliance: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಸೀಟು ಹಂಚಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ. ಶೀಘ್ರವೇ ಸೀಟು ಹಂಚಿಕೆ ಅಂತಿಮಗೊಳಿಸಲಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಿಯೋಗ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತು. ಮುಂಬರುವ ಲೋಕಸಭೆ ಚುನಾವಣೆ ಕುರಿತು ಮೋದಿ ಜೊತೆ ಚರ್ಚೆ ನಡೆಸಲಾಯಿತು
Loksabha Election: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ರಾಜ್ಯದ ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷ ಒಂದಾಗಿ ಚುನಾವಣೆ ಎದುರಿಸಲಿವೆ. ರಾಜ್ಯದ 28ಕ್ಷೇತ್ರಗಳಲ್ಲಿ ಬಿಜೆಪಿ 22ರಿಂದ 23 ಮತ್ತು ಜೆಡಿಎಸ್ ಪಕ್ಷ ನಾಲ್ಕರಿಂದ ಐದು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಕನ್ಫರ್ಮ್ ಎಂದು ಹೇಳಲಾಗುತ್ತಿದೆ.
ಪ್ರಭಾವಿ ಸಚಿವರು 50-60 ಶಾಸಕರ ಸಮೇತ ಬಿಜೆಪಿ ಸೇರುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ ಎಂದು ತಿರುಗೇಟು ನೀಡಿದ್ದಾರೆ.
HD Kumaraswamy: ಕಾಂಗ್ರೆಸ್’ನ ದೊಡ್ಡ ಸಚಿವರು, ಕಾಂಗ್ರೆಸ್’ನ ಹಲವು ಶಾಸಕರು ಬಿಜೆಪಿ ಸೇರಬಹುದು. ಬಿಜೆಪಿ ಸೇರಲು ತಯಾರಿ ನಡೆಸುತ್ತಿರುವ ಸಚಿವರು ಕರ್ನಾಟಕ ರಾಜಕೀಯದಲ್ಲಿ ದೊಡ್ಡ ನಾಯಕರಾಗಿರುವ ಕಾರಣ ಕಾಂಗ್ರೆಸ್ ಸರ್ಕಾರಕ್ಕೆ ಮುಂಬರುವ ದಿನಗಳು ಸಂಕಷ್ಟದ ದಿನಗಳು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭಾ ಚುನಾವಣೆ ನಂತರ ಕಾದು ನೋಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರವನ್ನು ಅಭದ್ರಗೊಳಿಸುವಂತ ಮಾತುಗಳು ಯಾವ ಪುರುಷಾರ್ಥಕ್ಕೆ, ಉದ್ದೇಶ ಏನು? ಎಂದು ಪ್ರಶ್ನಿಸಿದರು.
CM ibrahim Expelled : ಪಕ್ಷದ ಹಿತಕ್ಕಾಗಿ ಅವರ ಸಮ್ಮುಖದಲ್ಲಿಯೇ ಕೈಗೊಂಡ ನಿರ್ಧಾರವನ್ನು ಅವರು ವಿರೋಧಿಸಿ, ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಅಪಪ್ರಚಾರ ನಡೆಸಿದರು. ಇದರಿಂದ ಪಕ್ಷದ ವರ್ಚಸ್ಸು, ಹಿತಕ್ಕೆ ಧಕ್ಕೆ ಆಗಿದೆ. ಈ ನಿಟ್ಟಿನಲ್ಲಿ ಉಚ್ಛಾಟನೆಯ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.