Election Commission: ಅಭಿಜಿತ್ ಗಂಗೋಪಾಧ್ಯಾಯ ಅವರ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆ ಎಂದು ಚುನಾವಣಾ ಸಮಿತಿ ಅಭಿಪ್ರಾಯಪಟ್ಟಿದೆ.ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಗಂಗೋಪಾಧ್ಯಾಯ ಮಾಡಿದ ಹೇಳಿಕೆಗಳಿಗಾಗಿ ತೃಣಮೂಲ ಕಾಂಗ್ರೆಸ್ ನೀಡಿದ ದೂರಿನ ಮೇರೆಗೆ ಚುನಾವಣಾ ಆಯೋಗವು ಕ್ರಮ ಕೈಗೊಂಡಿದೆ.
ಬಿಜೆಪಿಯ ನಿಶಿಕಾಂತ್ ದುಬೆ ಅವರು ಅದಾನಿ ಗುಂಪು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.ಆದ್ದರಿಂದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧದ ಟೀಕಾ ಪ್ರಹಾರವನ್ನು ತೀವ್ರಗೊಳಿಸಿರುವ ಬಿಜೆಪಿ, ಮಮತಾ ಬ್ಯಾನರ್ಜಿ ಸರ್ಕಾರ ಪತನವಾಗುವುದು ಕೇವಲ ಸಮಯದ ವಿಷಯ ಎಂದು ಭಾನುವಾರ ಹೇಳಿದೆ.ಉತ್ತರ 24 ಪರಗಣ ಜಿಲ್ಲೆಯ ಬೊಂಗಾವ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ಸಂಸದ ಶಾಂತನು ಠಾಕೂರ್, ಟಿಎಂಸಿ ಸರ್ಕಾರ ಐದು ತಿಂಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಹೇಳಿದರು.
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಪಶ್ಚಿಮ ಬಂಗಾಳದಲ್ಲಿ 28,985 ಗ್ರಾಮ ಪಂಚಾಯಿತಿ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಮತ್ತು ಇನ್ನೂ 1,540 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ, ಆದರೆ ಪ್ರತಿಪಕ್ಷ ಭಾರತೀಯ ಜನತಾ ಪಕ್ಷ (ಬಿಜೆಪಿ) 7,764 ಸ್ಥಾನಗಳನ್ನು ಗಳಿಸಿ 417 ಸ್ಥಾನಗಳಲ್ಲಿ ಮುಂದಿದೆ.
TMC Vs BJP-Congress: ಪಂಚಾಯಿತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ನಾಯಕರಿಗೆ ಬಿದಿರಿನ ಕೋಲಿನಿಂದ ಹೊಡೆಯಲಾಗುವುದು ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ನುಸ್ರತ್ ಜಹಾನ್ ಹೇಳಿದ್ದಾರೆ. ನುಸ್ರತ್ ತಮ್ಮ ಲೋಕಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ರಾಜಕೀಯ ಪಕ್ಷಗಳು ತೀವ್ರ ತಿರುಗೇಟು ನೀಡಿವೆ.
Eid 2023: ಈದ್ ಪ್ರಾರ್ಥನೆಗಾಗಿ ನೆರೆದಿದ್ದ ಜನಸಮೂಹವನ್ನುದ್ದೇಶಿಸಿ ಮಾತನಾಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೋಗೆಯಬೇಕಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ ಯಾವುದೇ ಕಾರಣಕ್ಕೂ ದೇಶ ವಿಭಜನೆಗೆ ಅವಕಾಶ ನೀಡುವುದಿಲ್ಲ ಎಂದು ಮಮತಾ ಹೇಳಿದ್ದಾರೆ.
ಗೋವಾದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯ ಲುಜಿನ್ಹೋ ಫಲೈರೊ ಅವರು ಸಂಸತ್ತಿನ ಮೇಲ್ಮನೆಗೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಗೋವಾದಲ್ಲಿ ಪಕ್ಷದ ಚಟುವಟಿಕೆಗಳಿಂದ ಫಲೈರೊ ಅವರನ್ನು ಬಹಳ ಹಿಂದೆಯೇ ಹೊರಗಿಡಲಾಗಿತ್ತು, ಆದರೆ ಟಿಎಂಸಿ ನಾಯಕತ್ವವು ಅವರನ್ನು ರಾಜ್ಯಸಭೆಯನ್ನು ತೊರೆಯುವಂತೆ ಒತ್ತಾಯಿಸುತ್ತಿತ್ತು.
ಪುರಾ ವಿಧಾನಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದು, 2 ಲಕ್ಷ ಹೊಸ ಉದ್ಯೋಗಗಳು, 4 ರಿಂದ 8 ನೇ ತರಗತಿಯ ಶಾಲಾ ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 1,000 ರೂ. ಮತ್ತು ಪಶ್ಚಿಮ ಬಂಗಾಳದ ಮಾದರಿಯಲ್ಲಿ ಸಮಾಜ ಕಲ್ಯಾಣ ಯೋಜನೆಗಳ ಭರವಸೆ ನೀಡಿದೆ.
ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಅವರ ಪ್ರದರ್ಶನವನ್ನು ಹಿಂದೂ ಬಲಪಂಥೀಯ ಗುಂಪುಗಳ ಪ್ರತಿಭಟನೆಯ ನಂತರ ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಯಿತು. ಇದಾದ ನಂತರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ'ಬ್ರೇನ್ ಅವರು ವೀರ್ ದಾಸ್ ಅವರನ್ನು ಕೋಲ್ಕತ್ತಾಕ್ಕೆ ಆಹ್ವಾನಿಸಿದ್ದಾರೆ.
Mamata Defending PM Modi: ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಒಗ್ಗೂಡುವಿಕೆಯ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆರ್.ಎಸ್.ಎಸ್ ಅನ್ನು ಬಣ್ಣಿಸಿ ನಂತರ ಪ್ರಧಾನಿ ಮೋದಿ ಸಮರ್ಥಿಸಿದ್ದು, ನಿತೀಶ್ ಹಾಗೂ ಕಾಂಗ್ರೆಸ್ ಗೆ ನೀಡುತ್ತಿರುವ ಸಂಕೇತವಾಗಿದೆಯೇ ಎಂಬ ಗುಸುಗುಸು ಇದೀಗ ರಾಜಕೀಯ ವಲಯದಲ್ಲಿ ಕೇಳಿಬರಲಾರಂಭಿಸಿದೆ.
ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಅವರ ಕ್ಷೇತ್ರವಾದ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ಜಿಲ್ಲೆಯ ನಂದಿಗ್ರಾಮ್ನಲ್ಲಿ ಭಾನುವಾರ ನಡೆದ ಸಹಕಾರಿ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಮತ್ತು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ. ಇದಲ್ಲದೇ ಬಿಜೆಪಿ ಶಾಸಕ ಶಿವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಜೆಪಿಯವರೆಲ್ಲರೂ ಕಳ್ಳರು ಎಂದು ಆರೋಪಿಸಿದ ಮಮತಾ ಬ್ಯಾನರ್ಜೀ ತಾವು ರಾಜಕೀಯದಲ್ಲಿರದಿದ್ದರೆ ಅವರ ನಾಲಿಗೆಯನ್ನು ಸಿಳುತ್ತಿರುವುದಾಗಿ ಎಂದು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಇತ್ತೀಚೆಗಷ್ಟೇ ರಾಷ್ಟ್ರಪತಿ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದ ಯಶವಂತ್ ಸಿನ್ಹಾ ಅವರು ತೃಣಮೂಲ ಕಾಂಗ್ರೆಸ್ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.ಈ ವಿಷಯವನ್ನು ಸ್ವತಃ ಸಿಎಂ ಮಮತಾ ಬ್ಯಾನರ್ಜೀ ಹಂಚಿಕೊಂಡಿದ್ದಾರೆ.
‘ಉತ್ತರ ಬಂಗಾಳವನ್ನು ವಿಭಜಿಸದಿದ್ದರೆ ನನ್ನನ್ನು ಸಾಯಿಸುತ್ತೇನೆ ಎಂದು ಹೇಳುತ್ತಿದ್ದಾರೆ, ನಿಮಗೆ ದಮ್ಮಿದ್ದರೆ ನನ್ನ ಎದೆಗೆ ಗುಂಡಿಡಿ, ನಾನು ಸಾಕಷ್ಟು ಬಂದೂಕುಗಳನ್ನು ನೋಡಿದ್ದೇನೆ ಎಂದು ತಿರುಗೇಟು ನೀಡಿದರು.
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ರಾಷ್ಟ್ರೀಯ ಆರ್ಥಿಕತೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂದಿನ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.